ರಾಜಕೀಯ

ಉಪ್ಪುಂದ ಈಶ್ವರಪ್ಪ ಬೆಂಬಲಿಗರ ಸಮಾವೇಶಕ್ಕೆ ಮಕ್ಕಳ ಬಳಕೆ: ದೂರು

Views: 103

ಬೈಂದೂರು: ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಈಶ್ವರಪ್ಪ ಅವರ ಬೆಂಬಲಿಗರ ಸಮಾವೇಶ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ಆಯೋಜಿಸಲಾಗಿತ್ತು. ಇಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಪ್ರಚಾರಕ್ಕೆ ಕರೆತಂದಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ಉಪ್ಪುಂದದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಚುನಾವಣಾ ಅಧಿಕಾರಿ ಚಂದ್ರಶೇಖರ್ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ನಂದನವನ ಗ್ರಾಮದ ಹೋಟೆಲ್ ಸಭಾಂಗಣದಲ್ಲಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದ ಈ ಕುರಿತು ವಿಡಿಯೋ ಚಿತ್ರೀಕರಣ ಮಾಡಿದ್ದು, ಇದರ ಬಗ್ಗೆ ಪರಿಶೀಲಿಸಿದಾಗ ಸಭೆಯಲ್ಲಿ ಸೇರಿದ್ದ 25 ರಿಂದ 30 ಮಂದಿ 14 ವಯಸ್ಸಿಗಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು 15ಕ್ಕೂ ಹೆಚ್ಚು ಅಪ್ರಾಪ್ತ ವಯಸ್ಕರನ್ನು ಸಭೆಯಲ್ಲಿ ಭಾಗವಹಿಸಿರುವುದು ಕಂಡುಬಂದಿದೆ. ಮಕ್ಕಳು ತಮ್ಮ ವಯಸ್ಸನ್ನು 14ಕ್ಕಿಂತ ಕಡಿಮೆ ಎಂದು ತಿಳಿಸಿದ್ದಾರೆ. ಅವರೆಲ್ಲರೂ ಈಶ್ವರಪ್ಪ ಅವರ ಶಾಲು ಧರಿಸಿದ್ದರು. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಪ್ರಚಾರ ಕಾರ್ಯಕ್ಕೆ ಕರೆತಂದು ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದ್ದು,ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳಪೆ  ಬಿರಿಯಾನಿ ಬಗ್ಗೆಯು ದೂರು.!

ಈಶ್ವರಪ್ಪ ಸಮಾವೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು. ಮಧ್ಯಾಹ್ನದ ಊಟಕ್ಕೆ ಕಾರ್ಯಕರ್ತರಿಗೆ ಬಡಿಸಲು ಬಿರಿಯಾನಿ ಸಿದ್ಧಪಡಿಸಿದ್ದರು.

ಸಮಾವೇಶ ನಡೆಯುತ್ತಿದ್ದ ಸಭಾಂಗಣಕ್ಕೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ ಮಾಡಿದೆ.‌ಬಿರಿಯಾನಿ ಸಪ್ಲೈ ಮಾಡಿದರೆ ಚುನಾವಣೆ ವೆಚ್ಚಕ್ಕೆ ಸೇರ್ಪಡೆಗೊಳಿಸುವುದಾಗಿ ಅಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.

ತಯಾರಿಸುತ್ತಿದ್ದ ಬಿರಿಯಾನಿ ಅಲ್ಲೇ ಬಾಕಿ ಉಳಿದು ಬಿರಿಯಾನಿಗಾಗಿ ಕಾದು ಸುಸ್ತಾದ ಕಾರ್ಯಕರ್ತರು ಬಿರಿಯಾನಿ ತಿನ್ನದೇ ವಾಪಸಾದ ಘಟನೆ ನಡೆಯಿತು.

Related Articles

Back to top button