ರಾಜಕೀಯ
ಉಪ ಸಭಾಪತಿ ಮೇಲೆ ಕಾಗದಪತ್ರ ಎಸೆತ 10 ಬಿಜೆಪಿ ಸದಸ್ಯರ ಅಮಾನತು

Views: 0
ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅ ಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಯಿತು.
ಬಿಜೆಪಿಯ ಡಾ. ಅಶ್ವಥ್ ನಾರಾಯಣ ,ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ ಸುವರ್ಣ, ಸುನಿಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ, ಮತ್ತು ಭರತ್ ಶೆಟ್ಟಿ ಅವರನ್ನು ಸ್ಪೀಕರ್ ಯು.ಟಿ ಖಾದರ್ ಅವರು ಅಮಾನತು ಮಾಡಿದ್ದಾರೆ.
ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.
ಪ್ರೊಟೋ ಕಾಲ್ ಪ್ರಕಾರ ಅಧಿಕಾರಿಗಳು ನಡೆದುಕೊಂಡಿದ್ದಾರೆ. ಸಿಂಪಲ್ ವಿಚಾರಕ್ಕೆ ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷನ ಮೇಲೆ ಪೇಪರ್ ಎಸಿಯುತ್ತಾರೆ. ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು. ಕಾನೂನು ಕ್ರಮ ಆಗಬೇಕು ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹೇಳಿದರು.