ಕರಾವಳಿ

ಉಳ್ಳಾಲ: ಮನೆ ಮೇಲೆ ಗುಡ್ದ ಕುಸಿತ: ಒಂದೇ ಕುಟುಂಬದ ಮೂವರು ಬಲಿ

Views: 131

ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಉಳ್ಳಾಲದಲ್ಲಿ ಮನೆ ಮೇಲೆ ಗುಡ್ದ ಕುಸಿದು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ದುರಂತದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿ ಅಜ್ಜಿ-ಮೊಮ್ಮಗ ಸಾವನ್ನಪ್ಪಿದ್ದರು. ಮಣ್ಣಿನಡಿ ಸಿಲುಕಿದ್ದ ತಾಯಿ ಹಾಗೂ ಮಗುವನ್ನು ರಕ್ಷಿಸಲಾಗಿತ್ತು. ಆದರೆ ಮಗು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದೆ.

ಮಗುವಿನ ತಾಯಿ ಅಶ್ವಿನಿ ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದು, ಅವರ ಸ್ಥಿತಿ ಕೂಡ ಗಂಭೀರವಾಗಿದೆ. ಗಾಯಾಳು ಅಶ್ವಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button