ಇತರೆ

ಎನ್‌ಕೌಂಟರ್‌: 31 ನಕ್ಸಲರ ಹತ್ಯೆ, ಇಬ್ಬರು ಸೈನಿಕರು ಹುತಾತ್ಮ

Views: 153

ಕನ್ನಡ ಕರಾವಳಿ ಸುದ್ದಿ: ಛತ್ತೀಸ್‌ಗಢ: ಇಲ್ಲಿನ ಬಸ್ತಾರ್ ವಿಭಾಗದ ಬಿಜಾಪುರದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಹತರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಸೈನಿಕರು ಕೂಡಾ ಹುತಾತ್ಮರಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಬೆಳಗ್ಗೆ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಇದರ ಆಧಾರದ ಮೇಲೆ ಡಿಆರ್‌ಜಿ ಹಾಗೂ ಎಸ್‌ಟಿಎಫ್‌ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆಯಿತು ಎಂದು ಅವರು ತಿಳಿಸಿದರು

ಪ್ರಾಥಮಿಕ ಮಾಹಿತಿ ಪ್ರಕಾರ, ಸಾವನ್ನಪ್ಪಿರುವ 31 ಮಂದಿಯಲ್ಲಿ ಪ್ರಮುಖ ನಕ್ಸಲರಿದ್ದರು. ಸದ್ಯ ಭದ್ರತಾ ಪಡೆಗಳು ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. ಈ ಪ್ರದೇಶದಲ್ಲಿ ಶೋಧ ನಡೆಯುತ್ತಿದೆ ಎಂದು ಹೇಳಿದರು.

 

Related Articles

Back to top button