ಎಫ್‌ಐಆರ್ ದಾಖಲಾದರೆ ಸಿಎಂ ಸ್ಥಾನಕ್ಕೆ ಕುತ್ತು! ಡಿಕೆಶಿ- ಜಾರಕಿಹೊಳಿ ಮಹತ್ವದ ಬೇಟಿ.?

Views: 107
ಬೆಂಗಳೂರು: ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ವಿರುದ್ಧ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಂಥ ಹಿರಿಯ ಅನುಭವಿ ನ್ಯಾಯವಾದಿಗಳು ವಾದ ಮಂಡಿಸುತ್ತಿದ್ದರೂ ಕೂಡ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆಯುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾದರೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಮರ್ಥರಾಗಿರುತ್ತಾರೆಯೇ ಎಂಬ ಪ್ರಶ್ನೆ ಎದ್ದಿದೆ.
ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಸತೀಶ್ ಜಾರಕಿಹೊಳಿ ಅವರನ್ನು ಗುಪ್ತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ಒಂದು ವೇಳೆ ಸಿಎಂ ಸ್ಥಾನಕ್ಕೆ ಕುತ್ತು ಬಂದಿದ್ದೆಯಾದರೆ ಕೆಪಿಸಿಸಿ ಅಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ ಅವರಿಗೆ ಬಿಟ್ಟುಕೊಟ್ಟು ಡಿಕೆಶಿ ಸಿಎಂ ಪಟ್ಟಕ್ಕೇರಲಿದ್ದಾರೆ ಎಂಬ ಬಿಸಿ ಬಿಸಿ ಸುದ್ದಿ ಕೇಳಿ ಬಂದಿದೆ.
ಇನ್ನೊಂದು ಕಡೆ ಕೆಲವು ವರ್ಷಗಳ ಹಿಂದೆ ಬೆಳಗಾವಿ ರಾಜಕೀಯ ಮತ್ತು ಸಹಕಾರಿ ಬ್ಯಾಂಕ್‌ಗಳ ಹಿಡಿತದ ವಿಚಾರದಲ್ಲಿ ಇಬ್ಬರ ನಡುವೆ ಜಟಾಪಟಿ ನಡೆದಿತ್ತು. ಈ ಎಲ್ಲಾ ವೈಷಮ್ಯಗಳನ್ನು ಮರೆದು ಮುಂದಿನ ದಿನಗಳಲ್ಲಿ ಒಗ್ಗಟ್ಟಿನಿಂದ ಮುನ್ನಡೆಯೋಣ ಎಂದು ಸಾರಲು ಇಬ್ಬರೂ ಭೇಟಿಯಾಗಿದ್ದಾರೆ ಎಂದು ಕೇಳಿ ಬಂದಿದೆ. ಹೀಗಿರುವಾಗ ಇಬ್ಬರ ಭೇಟಿ ಮತ್ತು ಮಾತುಕತೆಯು ಕಾಂಗ್ರೆಸ್‌ನೊಳಗಿನ ಪ್ರಮುಖ ಬೆಳವಣಿಗೆಗಳನ್ನು ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆಯಾದರೆ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ ಸೇರಿದಂತೆ ಸಂಭಾವ್ಯರ ಪಟ್ಟಿ ಇದೆ. ಆದರೆ ಶಿವಕುಮಾರ್ ಅವರು ಸಿಎಂ ಆಗುವ ಮಹತ್ವಾಕಾಂಕ್ಷೆಯನ್ನು ಈಡೇರಿಸಲು ಬಯಸಿದರೆ, ಸತೀಶ್ ಜಾರಕಿಹೊಳಿ ಅವರ ಬೆಂಬಲವು ಆದೇಶ ನಿರ್ಣಾಯಕವಾಗಿದೆ,