ಇತರೆ

ಎರಡು ಮಕ್ಕಳ ತಂದೆಯ ಜೊತೆ ಪ್ರೀತಿ, ಮದುವೆ: ಮಹಿಳೆ ಕೊಂದು ಟ್ಯಾಂಕ್ಗೆ ಎಸೆದ ಪತಿ

Views: 129

ಕನ್ನಡ ಕರಾವಳಿ ಸುದ್ದಿ: ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದು, ಶವವನ್ನು ಪೆಟ್ಟಿಗೆಯಲ್ಲಿ ತುಂಬಿ ಸೆಪ್ಟಿಕ್ ಟ್ಯಾಂಕ್ನಲ್ಲಿ ಎಸೆದಿರುವ ಪ್ರಕರಣ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಕೊಲೆಯಾದ ಮಹಿಳೆಯನ್ನು ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ಬೋಫಾಲ್ ನಿವಾಸಿ ಸಮೀರ್ ಖಾನ್‌ ಕೊಲೆಗೈದ ಆರೋಪಿ ಪತಿಯಾಗಿದ್ದು, ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ಆರೋಪಿಯ ಕುಟುಂಬಸ್ಥರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಭೋಪಾಲ್‌ನ ನಿಶಾತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಮಲ್ ನಗರದಲ್ಲಿ ಗುರುವಾರ ಪ್ರಕರಣ ಬೆಳಕಿಗೆ ಬಂದಿದೆ. ಸೆಪ್ಟಿಕ್ ಟ್ಯಾಂಕ್‌ನಿಂದ ದುರ್ವಾಸನೆ ಬಂದ ಹಿನ್ನೆಲ್ಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಶವ ಪೆಟ್ಟಿಗೆ ಕಂಡುಬಂದಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸರು ಆಗಮಿಸಿ, ಪೆಟ್ಟಿಗೆ ಹೊರ ತೆಗೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಾಗ, ಪತಿಯೇ ಪತ್ನಿಯನ್ನು ಕೊಂದಿರುವುದು ಗೊತ್ತಾಗಿದೆ.

ಮಹಾರಾಷ್ಟ್ರದ ಮೂಲದ ಅಶ್ರಫಿ ಮತ್ತು ಭೋಪಾಲ್ ಮೂಲದ ಆಟೋ ಚಾಲಕ ಸಮೀರ್ ಖಾನ್ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಇವರ ಪರಿಚಯ ಸ್ನೇಹವಾಗಿ, ಪ್ರೀತಿಗೆ ತಿರುಗಿತ್ತು. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಕೂಡ ಸಮೀರ್ ಪ್ರೀತಿ ಮಾಡಿದ್ದ. ಜೊತೆಗೆ ಈ ವಿಷಯ ಮುಚ್ಚಿಟ್ಟು ಆಶ್ರಫಿಯನ್ನು ಮದುವೆಯಾಗಿ ನಾಲ್ಕೈದು ತಿಂಗಳಿನಿಂದ ಜೊತೆಯಾಗಿ ಸಂಸಾರ ಮಾಡುತ್ತಿದ್ದರು. ಇತ್ತೀಚೆಗೆ ಸಮೀರ್ನ ಮೊದಲ ಮದುವೆ ಮಕ್ಕಳ ಬಗ್ಗೆ ಅಶ್ರಫಿಗೆ ಗೊತ್ತಾದಾಗ ದಂಪತಿ ನಡುವೆ ಜಗಳ ಆರಂಭವಾಗಿತ್ತು. ಈ ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಪತ್ನಿಯನ್ನು ಆತ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

Related Articles

Back to top button
error: Content is protected !!