ಆರೋಗ್ಯ

ಎರಡು ವರ್ಷಗಳ ಹಿಂದೆ ಮಹಿಳೆ ಹೊಟ್ಟೆಯೊಳಗೆ ಕತ್ತರಿ ಬಿಟ್ಟ ಪ್ರಕರಣ:ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮ

Views: 117

ಕನ್ನಡ ಕರಾವಳಿ ಸುದ್ದಿ: ಎರಡು ವರ್ಷಗಳ ಹಿಂದೆ ಕ್ಯಾನ್ಸರ್ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಮಹಿಳೆಯ ಆಪರೇಷನ್ ಮಾಡಿದ ವೈದ್ಯರು ಆಕೆಯ ಹೊಟ್ಟೆಯೊಳಗೆ ಕತ್ತರಿ ಹಾಗೇ ಬಿಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದ ಈ ಪ್ರಕರಣದಲ್ಲಿ ಎರಡು ವರ್ಷಗಳ ಬಳಿಕ ಮಹಿಳೆಯ ಹೊಟ್ಟೆಯ ಒಳಗಿನಿಂದ ಕತ್ತರಿ ಹೊರಗೆ ತೆಗೆಯಲಾಗಿದೆ.

ಮಾಹಿತಿಗಳ ಪ್ರಕಾರ, 2 ವರ್ಷಗಳ ಹಿಂದೆ ಗ್ವಾಲಿಯರ್ನ ಸರ್ಕಾರಿ ಆಸ್ಪತ್ರೆಯಲ್ಲಿ ಆ ಮಹಿಳೆ ಆಪರೇಷನ್ ಮಾಡಿಸಿಕೊಂಡ ವೇಳೆ ವೈದ್ಯರು ಆಕೆಯ ಹೊಟ್ಟೆಯಲ್ಲಿ ಕತ್ತರಿ ಬಿಟ್ಟಿದ್ದಾರೆ. ಭಿಂಡ್ ಜಿಲ್ಲಾ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಉಸ್ತುವಾರಿ ಸತೀಶ್ ಶರ್ಮಾ ಅವರು ಕಮಲಾ ಎಂಬ ಮಹಿಳೆಯ ಸಿಟಿ ಸ್ಕ್ಯಾನ್ ಮಾಡುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ?:ಮಹಳೆಯ ಹೊಟ್ಟೆಯ ಕ್ಯಾನ್ಸರ್‌ಗಾಗಿ 2022ರ ಫೆಬ್ರವರಿ 20ರಂದು ಗ್ವಾಲಿಯರ್‌ನ ಕಮಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ವೇಳೆ ವೈದ್ಯರು ನಿರ್ಲಕ್ಷ್ಯ ವಹಿಸಿ ಮಹಿಳೆಯ ಹೊಟ್ಟೆಯಲ್ಲಿ ಕತ್ತರಿ ಬಿಟ್ಟಿದ್ದಾರೆ. ಮಹಿಳೆಗೆ ಅದರ ಅರಿವೇ ಇರಲಿಲ್ಲ. ಆದರೆ, ಕಳೆದ ಕೆಲವು ದಿನಗಳಿಂದ ಮಹಿಳೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಔಷಧಿ ನೀಡಿದರೂ ನೋವು ಕಡಿಮೆಯಾಗದಿದ್ದಾಗ ವೈದ್ಯರು ಸಿಟಿ ಸ್ಕ್ಯಾನ್ ಮಾಡುವಂತೆ ಸೂಚಿಸಿದ್ದು, ಈ ವೇಳೆ ಹೊಟ್ಟೆಯಲ್ಲಿ ಕತ್ತರಿ ಸ್ಪಷ್ಟವಾಗಿ ಗೋಚರಿಸಿದೆ. ಹೊಟ್ಟೆಯಲ್ಲಿದ್ದ ಕತ್ತರಿ ಮಹಿಳೆಗೆ ಮಾರಕವಾಗಬಹುದು. ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಹಾಗೂ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿರುವ ವೈದ್ಯ ಸತೀಶ್ ಶರ್ಮಾ ಕೂಡ ಇದನ್ನು ಖಚಿತಪಡಿಸಿದ್ದಾರೆ

Related Articles

Back to top button