ಇತರೆ

ಎರಡು ವರ್ಷದ ಮಗುವಿಗೆ ನೇಣು ಹಾಕಿಸಿ, ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 119

ಎರಡು ವರ್ಷದ ಹೆಣ್ಣು ಮಗುವಿಗೆ ನೇಣು ಹಾಕಿಕೊಂದು ನಂತರ ತಾನೂ ನೇಣು ಹಾಕಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಲೀಲಾ ಗಂಡ ಆನಂದ (24) ಎಂಬ ಮಹಿಳೆಯೇ ಎರಡು ವರ್ಷದ ಮಗು ವರುಳನ್ನು ನೇಣು ಹಾಕಿ ನಂತರ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Related Articles

Back to top button