ಶಿಕ್ಷಣ
ಎಸ್ಸೆಸ್ಸೆಲ್ಸಿ ಪರೀಕ್ಷಾ ಭಯದಿಂದ ಆರಂಭದ ದಿನವೇ ವಿದ್ಯಾರ್ಥಿ ಆತ್ಮಹತ್ಯೆ!

Views: 165
ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭದ ದಿನವೇ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆನಂದಪುರದ ಕೆಪಿಎಸ್ಸಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪರಶುರಾಮ್ ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದರೆ ಕೊನೇ ಕ್ಷಣದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.