ಜನಮನ

ಒಂದು ವರ್ಷದೊಳಗೆ ವೈವಾಹಿಕ ಪ್ರಕರಣ ಇತ್ಯರ್ಥ ಪಡಿಸಿ: ಹೈಕೋರ್ಟ್ ಆದೇಶ

Views: 1

ಪತ್ನಿಯೊಂದಿಗಿನ ವಿವಾಹ ಬಂಧನವನ್ನು ಅನೂರ್ಜಿತಗೊಳಿಸಬೇಕು ಎಂದು ರಾಜೀವ್ ಎನ್ನುವರು 2016ರಲ್ಲಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣ ವಿಲೇವಾರಿ ಆಗದ ಕಾರಣ ತಮ್ಮ ಅರ್ಜಿಯನ್ನು ಮೂರು ತಿಂಗಳಲ್ಲಿ ಇತ್ಯರ್ಥ ಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜೀವ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು.

ವಿವಾಹ ವಿಚ್ಛೇದನ ಸಹಿತ ವೈವಾಹಿಕ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬ ಮಾಡಿದರೆ ಎರಡು ಕುಟುಂಬಗಳ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್ ಗರಿಷ್ಠ ಒಂದು ವರ್ಷದೊಳಗೆ ಇತ್ಯರ್ಥ ಪಡಿಸಬೇಕು ಎಂದು ಆದೇಶಿಸಿದೆ.

ಈ ಸಂಬಂಧ ನ್ಯಾಯಮೂರ್ತಿ ಕೃಷ್ಣ. ಎಸ್. ದೀಕ್ಷಿತ್ ಅವರಿಂದ ಏಕ ಸದಸ್ಯ ನ್ಯಾಯ ಪೀಠ ಮನುಷ್ಯ ಜೀವನದ ಅಲ್ಪಾವಧಿಯನ್ನು ಗಮನದಲ್ಲಿಟ್ಟುಕೊಂಡು ವೈವಾಹಿಕ ಪ್ರಕರಣಗಳ ವಿಲೇವಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕಿದೆ ಎಂದು ಹೇಳಿದೆ.

ಈ ಆದೇಶವನ್ನು ಸಂಬಂಧಪಟ್ಟ ಎಲ್ಲರಿಗೂ ರವಾನಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನ್ಯಾಯ ಪೀಠ ನಿರ್ದೇಶನ ನೀಡಿದೆ.

Related Articles

Back to top button
error: Content is protected !!