ಜನಮನ

ಒಂದು ವಾರಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ನಿರೀಕ್ಷೆ 

Views: 181

ಕನ್ನಡ ಕರಾವಳಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಮಳೆ ಮುಂದುವರಿಯಲಿದೆ. ಇನ್ನು ಒಂದು ವಾರಗಳ ಕಾಲ (ಆಗಸ್ಟ್ 07) ರಾಜ್ಯದಲ್ಲಿ ಮಲೆನಾಡು ಹಾಗೂ ಕರಾವಳಿಯ ಜಿಲ್ಲೆಗಳು ಒಳಗೊಂಡಂತೆ ವಿವಿಧೆಡೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ತುಮಕೂರು, ಚಾಮರಾಜನಗರ ಸೇರಿದಂತೆ ವಿವಿಧೆಡೆ ವ್ಯಾಪಕ ಮಳೆ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಈವರೆಗೆ ಸುರಿದಿದ್ದ ಭಾರೀ ಮಳೆಗೆ ಗುರುವಾರದಿಂದ ಬ್ರೇಕ್ ಬಿದ್ದಿದೆ. ಇನ್ನು ಮುಂದೆ ಸಾಧಾರಣ, ಆಗಾಗ ಜೋರು ಮಳೆ ಆಗಲಿದೆ. ಇದರೊಂದಿಗೆ ತುಮಕೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ರಾಮನಗರ, ಮಂಡ್ಯದಲ್ಲಿ ಆಗಾಗ ಮಳೆ ಆಗಲಿದೆ.

ಹಾವೇರಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಬಾಗಲಕೋಟೆ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದೆ. ಅಲ್ಲಲ್ಲಿ ಹಗುರ ಮಳೆ ನಿರೀಕ್ಷೆ ಇದೆ. ಇದರ ಹೊರತು ಭಾರೀ ಮಳೆಯ ಎಚ್ಚರಿಕೆ ಇಲ್ಲ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

Related Articles

Back to top button