ಇತರೆ

ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆ:ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಪತ್ತೆ

Views: 194

ಕನ್ನಡ ಕರಾವಳಿ ಸುದ್ದಿ: ಡೆಹ್ರಾಡೂನ್‌ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27 ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ.

ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್‌, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತಮ್ಮ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕುಟುಂಬವನ್ನು ಮೊದಲು ಸ್ಥಳೀಯರು ನೋಡಿದ್ದಾರೆ. ಕಾರಿನೊಳಗೆ ಅವರು ಕಷ್ಟಪಡುತ್ತಿರುವುದನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕುಟುಂಬ ಸದಸ್ಯರನ್ನು ರಕ್ಷಿಸಿದರು.

Related Articles

Back to top button