ಕಟೀಲು:ಸಂಶಯಾಸ್ಪದ ಸಾವು: ಪೊಲೀಸರಿಂದ ತೀವ್ರ ತನಿಖೆ, ಮೃತನ ಸಹೋದರ ವಶಕ್ಕೆ

Views: 195
ಕಟೀಲು: ಅನುಮಾನಾಸ್ಪದವಾಗಿ ಸಾವಿಗೀಡಾದ ರೀತಿಯಲ್ಲಿ ಕಟೀಲು-ಗಿಡಿಗೆರೆ ಸಮೀಪ ಭಾನುವಾರ ಬೆಳಿಗ್ಗೆ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯ ವೇಳೆ ಸಂಶಯಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ವಿಶೇಷ ತಂಡಗಳಿಂದ ತನಿಖಾ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಟೀಲು-ಕೊಂಡೆಮೂಲ ನಿವಾಸಿ ತಾರನಾಥ(40) ಎಂಬಾತ ಮನೆಯಿಂದ 100 ಮೀ. ದೂರದಲ್ಲಿ ಕೇಬಲ್ ವಯರ್ ಕುತ್ತಿಗೆಗೆ ಬಿಗಿದು ಅಂಗಾತ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಶನಿವಾರ ಸಂಜೆ ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ. ಪೊಲೀಸರು. ಪರಿಸರದ ಸಿಸಿ ಕ್ಯಾಮೆರಾ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಮನೆಯಲ್ಲಿಯೇ ಇದ್ದ ತಾರನಾಥನ ಸಹೋದರನನ್ನು ಬಜಪೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮರಣೋತ್ತರ ಪರೀಕ್ಷೆ ಅಂತಿಮಗೊಂಡಿಲ್ಲವಾದ ಕಾರಣ ವರದಿ ಪಡೆದ ಬಳಿಕವಷ್ಟೇ ಈ ಅನುಮಾನಾಸ್ಪದ ಸಾವು ಆತ್ಮಹತ್ಯೆಯೋ? ಕೊಲೆಯೋ? ಎಂಬುದರ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.