ಧಾರ್ಮಿಕ

ಕಟೀಲು ಮೇಳ ರಾತ್ರಿ ಇಡೀ ಯಕ್ಷಗಾನ ಪ್ರದರ್ಶನಕ್ಕೆ ಹೈಕೋರ್ಟ್ ಅನುಮತಿ

Views: 45

ಮಂಗಳೂರು: ಕಾಲಮಿತಿ ಪದ್ಧತಿಯಲ್ಲಿ ನಡೆಯುತ್ತಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯು ಆರು ಮೇಳಗಳ ಯಕ್ಷಗಾನ ಪ್ರದರ್ಶನ ಜನವರಿ 14 ರಿಂದ ಮತ್ತೆ ಹಳೇ ಪದ್ದತಿಯಂತೆ ರಾತ್ರಿ ಇಡೀ ಪ್ರದರ್ಶನ ನಡೆಯಲಿದೆ.

ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಶ್ರೀ ಕಟೀಲು ಮೇಳ ಈ ಬಾರಿಯೂ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಪ್ರದರ್ಶನ ನೀಡಿದೆ.

ಯಕ್ಷಗಾನ ಪಾರಂಪರಿಕ ಮೇಳವೆಂದೇ ಖ್ಯಾತವಾಗಿರುವ ಶ್ರೀ ಕಟೀಲು ಯಕ್ಷಗಾನ ಮಂಡಳಿಯ ಬಯಲಾಟ ಪ್ರದರ್ಶನವನ್ನು ಕಾಲಮಿತಿಗೆ ಒಳಪಡಿಸುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ಭಕ್ತಾದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಬೆಳಿಗ್ಗೆ ವರೆಗೂ ಯಕ್ಷಗಾನ ಪ್ರದರ್ಶನ ನಡೆಯುವಂತೆ ಅಗ್ರಹಿಸಿ ‘ಕಟೀಲಮ್ಮನೆಡೆಗೆ ಭಕ್ತರ ನಡೆ’ ಪಾದಯಾತ್ರೆಯನ್ನು ಈ ಹಿಂದೆ ನಡೆಸಿದ್ದರು.

ಉಚ್ಚ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರದ ಅಪೇಕ್ಷೆ ಮೇರೆಗೆ ಜನವರಿ 14ರ ಮಕರ ಸಂಕ್ರಾಂತಿಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಅನುವಂಶಿಕ ಆಡಳಿತ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ ಹಾಗೂ ಅನುವಂಶಿಕ ಮುಕ್ತಸರ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.

ಬೆಂಗಳೂರಿನ ಕೃಷ್ಣಕುಮಾರ್ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಪೂರ್ಣ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ತೊಂದರೆ ಇಲ್ಲ,ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದಿತ್ತು, ಶಬ್ದ ಮಾಲಿನ್ಯ ಉಂಟಾಗಬಾರದು, ಧ್ವನಿವರ್ಧಕ ಬಳಕೆಯಿಂದ ಹಳ್ಳಿಗಳಲ್ಲಿ ಯಾವುದೇ ಸಮಸ್ಯೆ ಇಲ್ಲ ನಗರದಲ್ಲಿ ಅದರ ಶಬ್ದಮಿತಿಯನ್ನು ನೋಡಿಕೊಳ್ಳಲಾಗುವುದು ಇದು ಹರಕೆಯ ಆಟವಾಗಿದ್ದರಿಂದ ಜನರಿಗೆ ಯಾವುದೇ ಸಮಸ್ಯೆ ಆಗಲಾರದು ಎಂದು ಆಡಳಿತ ಮಂಡಳಿ ತಿಳಿಸಿದೆ.

Related Articles

Back to top button