ಕಮಲ -ಜೆಡಿಎಸ್ ಮೈತ್ರಿ ಲೆಕ್ಕಾಚಾರ: ಶೀಘ್ರದಲ್ಲಿ ದೆಹಲಿಗೆ ಕುಮಾರಸ್ವಾಮಿ

Views: 0
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಸಂಭಾವ್ಯ ಮೈತ್ರಿಯ ಸುಳಿವು ಕೊಟ್ಟಿದ್ದು, ಶೀಘ್ರದಲ್ಲಿ ದೆಹಲಿಗೆ ಭೇಟಿ ನೀಡಿ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.
ಬಿಜೆಪಿಯೊಂದಿಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ವ್ಯಕ್ತಪಡಿಸಿದ ಕುಮಾರಸ್ವಾಮಿ ಹಳೆ ಮೈಸೂರು ಭಾಗದಲ್ಲಿ 5-6 ಲೋಕಸಭಾ ಸ್ಥಾನಗಳನ್ನು ಕೇಳಬಹುದು.
ವಿಧಾನಸಭಾ ಚುನಾವಣೆ ಯಲ್ಲಿ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ ಲೋಕಸಭಾ ಚುನಾವಣೆಯ ಲ್ಲಾದರೂ ಚೇತರಿಸಿಕೊಳ್ಳುವ ಲೆಕ್ಕಚಾರದಲ್ಲಿದೆ..
ಈ ಮಧ್ಯೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿ ಯಲ್ಲಿ ಕಚ್ಚಾಡಿಕೊಳ್ಳುತ್ತಿದ್ದಾರೆ .ನೋಡ್ತಾ ಇರಿ ಕುಮಾರಸ್ವಾಮಿಯವರೇ ವಿರೋಧ ಪಕ್ಷದ ನಾಯಕ ಆಗುತ್ತಾರೆ. ವಿರೋಧ ಪಕ್ಷದ ನಾಯಕನ ಸ್ಥಾನ ಜೆಡಿಎಸ್ ಮನೆ ಬಾಗಿಲಿಗೆ ಬರುತ್ತಿದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಭವಿಷ್ಯ ನಡೆದಿದ್ದಾರೆ.
ಇದಕ್ಕೆ ಪುಷ್ಠಿ ನೀಡುವಂತೆ ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ಮಧ್ಯೆ ಮಾತುಕತೆ ನಡೆಯುತ್ತಿದೆ ಜುಲೈ 18ರ ನಂತರ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.