ಕರಾವಳಿಯಲ್ಲಿ ಗುಡುಗು ಸಹಿತ ಮಳೆ, ವಾಯುಭಾರ ಕುಸಿತ ಹಿನ್ನೆಲೆ ಮಳೆ ಮುನ್ಸೂಚನೆ

Views: 64
ಕನ್ನಡ ಕರಾವಳಿ ಸುದ್ದಿ : ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಕರಾವಳಿ ಜಿಲ್ಲೆ ಉಡುಪಿಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಕಾರ್ಕಳ, ಹೆಬ್ರಿ -ಕಾಪು, ಉಡುಪಿಯ ಹಲವೆಡೆ ಮಳೆಯಾಗಿದೆ.
ಕಾರ್ಕಳ -ಹೆಬ್ರಿಯಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಉಡುಪಿ, ಕಾಪು ತಾಲೂಕಿನಲ್ಲಿ ಕೆಲಕಾಲ ಸಾಧಾರಣ ಮಳೆಯಾಗಿದೆ. ಇನ್ನೂ ಎರಡು ದಿನಗಳ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು ಇದು ಇದರ ಪ್ರಭಾವ ಕರ್ನಾಟಕದ ಮೇಲೂ ಉಂಟಾಗಿದೆ. ಅಲ್ಲದೆ ನಿನ್ನೆ ಕರಾರವಳಿ ಭಾಗದಲ್ಲಿ ಹಲವೆಡೆ ಮಳೆ ಉಂಟಾಗಿದೆ. ಹೀಗೆ ಇಂದು ಕೂಡ ಮಳೆ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ವಿಜಯನಗರ, ಶಿವಮೊಗ್ಗ, ಕಲಬುರಗಿ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಗದಗ, ಬೆಳಗಾವಿ, ಯಾದಗಿರಿ, ಕೊಪ್ಪಳ, ಬೀದರ್, ಬಾಗಲಕೋಟೆ, ತುಮಕೂರು, ಹಾವೇರಿ, ಧಾರವಾಡಯಲ್ಲಿ ಒಣಹವೆ ಇರಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಾಮಾರಜನಗರ, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.