ಜನಮನ
ಕರಾವಳಿಯಲ್ಲಿ ಭಾರೀ ಮಳೆ: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಜುಲೈ 6 ರಂದು ರಜೆ ಮುಂದುವರಿಕೆ

Views: 0
ಕರ್ನಾಟಕ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಬುಧವಾರ ಉತ್ತರ ಕನ್ನಡ ,ಉಡುಪಿ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದರಿಂದ ಈ ಮೂರು ಜಿಲ್ಲೆಗಳಲ್ಲಿ ಜುಲೈ 6 ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಮುನ್ಸೂಚನೆಯ ಪ್ರಕಾರ ರೆಡ್ ಅಲರ್ಟ್ ಹಾಗೂ ಹೆಚ್ಚಿನ ಮಳೆ ಆಗುವ ಸಾಧ್ಯತೆಯ ಇರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.ಆಯಾ ಜಿಲ್ಲೆಯ ಅಧಿಕಾರಿಗಳು ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಿರುತ್ತಾರೆ.