ಕರಾವಳಿ ಜಿಲ್ಲೆಗಳಲ್ಲಿ ಗಾಳಿ, ಮಳೆ ಅಬ್ಬರ ಮೀನುಗಾರರಿಗೆ ಎಚ್ಚರಿಕೆ

Views: 0
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನ ಮಳೆ ಮುಂದುವರೆಯುವ ಸೂಚನೆಯನ್ನು ಹವಾಮಾನ ಇಲಾಖೆ ಸೂಚಿಸಿದೆ.
ಕರಾವಳಿ ಜಿಲ್ಲೆಗಳು ಒಳಗೊಂಡು ರಾಜ್ಯದ 13 -14 ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ.
ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆಯಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡದ ಶಿರಸಿ ತಾಲೂಕಿನಲ್ಲಿ ಕಳೆದ ಮೂರು- ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಗ್ರಾಮೀಣ ಭಾಗದಲ್ಲಿ ಹಳ್ಳ ಕೊಳಗಳು ತುಂಬಿಕೊಳ್ಳುತ್ತಿವೆ. ಶಾಲ್ಮಲಾ, ಆಘನಾಶಿನಿ,ವರದಾ ನದಿಗಳಲ್ಲಿ ನೀರಿನ ಪ್ರಮಾಣ ನಿಧಾನವಾಗಿ ಏರಿಕೆಯಾಗುತ್ತಿದೆ.
ಮಲೆನಾಡಿನ ಶಿವಮೊಗ್ಗ ನಗರ ಸೇರಿದಂತೆ ದಾವಣಗೆರೆ ಹಾಗೂ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಬಿರುಸು ಪಡೆದಿದೆ. ಹೊಸನಗರ ತಾಲೂಕಿನ ಯಡೂರಿನಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಶರಾವತಿ ನದಿ ತುಂಬಿ ಹರಿಯುತ್ತಿದ್ದು, ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಇದರ ನಡುವೆಯೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರು, ಜನರು ಬರಪೀಡಿತ ಪ್ರದೇಶ ಘೋಷಣೆಗೆ ಅಗ್ರಹಿಸಿದ್ದಾರೆ.