ಕರಿಮಣಿ ಮಾಲೀಕ ಹಾಡಿಗೆ ಪತ್ನಿ ರೀಲ್ಸ್: ಮಾತಿನ ಚಕಮಕಿಯೊಂದಿಗೆ ಪತಿ ಮನನೊಂದು ಆತ್ಮಹತ್ಯೆ

Views: 103
ಚಾಮರಾಜನಗರ, ಪತ್ನಿ ಮಾಡಿದ ರೀಲ್ಸ್‌ನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಮೃತ ದುರ್ದೈವಿ. ಇನ್ನು ಈ ಸಂಬಂಧ ಮೃತ ಕುಮಾರ್ ಪತ್ನಿ ರೂಪಾ ಸೋದರ ಮಾವ ಗೋವಿಂದ ವಿರುದ್ಧ ದೂರು ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಏನಿದು ರೀಲ್ಸ್ ಕಥೆ?: ಕಳೆದ ಫೆಬ್ರವರಿ 10ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಹಾಗೂ ರೂಪಾ ತೆರಳಿದ್ದರು. ಒಂದು ದಿನ ಇದ್ದು ಕುಮಾರ್ ಪಿ.ಜಿ.ಪಾಳ್ಯಕ್ಕೆ ವಾಪಾಸಾದರೇ ರೂಪಾ ಅಲ್ಲೇ ಉಳಿದುಕೊಂಡಿದ್ದರು.
ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾರೆ. ಸ್ನೇಹಿತರು ಇದನ್ನು ಕುಮಾರ್‌ನ ಗಮನಕ್ಕೆ ತಂದ ವೇಳೆ ದಂಪತಿ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಮನನೊಂದ ಪತಿ ಕುಮಾರ್ ಮನೆ ಮುಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದು ಇಂದು (ಫೆಬ್ರವರಿ 15) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹನೂರು ಆಸ್ಪತ್ರೆಗೆ ಶವವನ್ನು ರವಾನೆ ಮಾಡಲಾಗಿದೆ. ಇನ್ನು ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.