ಕರ್ನಾಟಕ ಸೇರಿದಂತೆ ದೇಶದ15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

Views: 57
ದೇಶದ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ.
13 ರಾಜ್ಯಗಳ 50 ರಾಜ್ಯಸಭಾ ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿದ್ದು, ಎರಡು ರಾಜ್ಯಗಳ ಉಳಿದ ಆರು ಸದಸ್ಯರು ಏಪ್ರಿಲ್ 3 ರಂದು ನಿವೃತ್ತರಾಗಲಿದ್ದಾರೆ. ರಾಜ್ಯಸಭಾ ಸದಸ್ಯರ ಅಧಿಕಾರಾವಧಿ ಆರು ವರ್ಷಗಳಾಗಿವೆ.
ರಾಜ್ಯಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಗುಜರಾತ್, ಆಂಧ್ರ ಪ್ರದೇಶ, ತೆಲಂಗಾಣ, ರಾಜಸ್ಥಾನ, ಕರ್ನಾಟಕ, ಉತ್ತರಾಖಂಡ, ಛತ್ತೀಸ್‌ಗಢ, ಒಡಿಶಾ, ಹರಿಯಾಣ ಮತ್ತು ಹಿಮಾಚಲ ಪ್ರದೇಶ ಸೇರಿವೆ.
ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದ ತಲಾ 5, ಗುಜರಾತ್ ಮತ್ತು ಕರ್ನಾಟಕದ ತಲಾ 4, ಒಡಿಶಾ, ಆಂಧ್ರ ಪ್ರದೇಶ ಮತ್ತು ರಾಜಸ್ಥಾನದ ತಲಾ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ರಾಜ್ಯಸಭೆಯ ಮೂರನೇ ಒಂದು ಭಾಗದಷ್ಟು ಸದಸ್ಯರು ಪ್ರತಿ ಎರಡು ವರ್ಷಗಳಿಗೊಮ್ಮೆ ನಿವೃತ್ತರಾಗುತ್ತಾರೆ. ಸಂಸತ್ತಿನ ಮೇಲ್ಮನೆಯ ಸದಸ್ಯರು ರಾಜ್ಯ ವಿಧಾನ ಸಭೆಗಳ ಚುನಾಯಿತ ಸದಸ್ಯರಿಂದ ಪರೋಕ್ಷವಾಗಿ ಚುನಾಯಿತರಾಗುತ್ತಾರೆ.