ರಾಜಕೀಯ

ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರ್ಪಡೆಗೆ ಶೆಟ್ಟರ್‌ಗೆ ಹೈಕಮಾಂಡ್‌ ಕೊಟ್ಟ 3 ಆಫರ್‌ ಯಾವುದು?

Views: 127

ಬೆಂಗಳೂರು,  ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದಲ್ಲಿ ರಾಜ್ಯ ಬಿಜೆಪಿ ನಾಯಕರು ಯಶಸ್ವಿಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಅಮಿತ್‌ ಶಾ ಜೊತೆಗೆ ಚರ್ಚೆ ನಡೆಸಿ, ದೆಹಲಿಯಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಂಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಸಿಗಲಿಲ್ಲ ಎಂಬ ಕಾರಣಕ್ಕೆ ಮುನಿಸುಕೊಂಡು ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸೇರಿದ್ದರು, ಇದು ಬಿಜೆಪಿಗೆ ಭಾರಿ ಪೆಟ್ಟು ಕೊಟ್ಟಿತ್ತು, ಇದರ ಪರಿಣಾಮ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿತು. ಇದೆಲ್ಲದವನ್ನು ಮನಗಂಡ ಯಡಿಯೂರಪ್ಪ ಮತ್ತೆ ಜಗದೀಶ್‌ ಶೆಟ್ಟರ್‌ ಅನ್ನು ಬಿಜೆಪಿಗೆ ಕರೆತರಲೇ ಬೇಕು ಎಂದು ಶಪಥ ಮಾಡಿದ್ರು, ಅದರಂತೆ ಈಗ ಸಕ್ಸಸ್‌ ಆಗಿದ್ದಾರೆ. ಅಲ್ಲದೇ ಹೈಕಮಾಂಡ್‌ ಅನ್ನು ಮನವೊಲಿಸಿ, ಅಮಿತ್‌ ಶಾ ಜೊತೆಗೆ ಜಗದೀಶ್‌ ಶೆಟ್ಟರ್‌ ಅನ್ನು ಮಾತಾಡಿಸಿದ್ದಾರೆ. ಈ ವೇಳೆ ಜಗದೀಶ್‌ ಶೆಟ್ಟರ್‌ ಬಿಜೆಪಿ ಬರುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್‌ ಹಲವು ಆಫರ್‌ ನೀಡಿದ್ದಾರೆ ಎಂದು ಹೇಳಲಾಗಿದೆ.

ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಸಾಲು ಸಾಲು ಬಿಜೆಪಿ ನಾಯಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ನಷ್ಟಕ್ಕೆ ಕಾರಣವಾಗಿತ್ತು. ಹೀಗಾಗಿ ಮೂರು ಆಫರ್‌ಗಳನ್ನು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ನೀಡುವ ಮೂಲಕ ಪಕ್ಷಕ್ಕೆ ಬಿಜೆಪಿ ನಾಯಕರು ಕರೆತಂದಿದ್ದಾರೆ ಎನ್ನಲಾಗಿದೆ.

ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಹೈಕಮಾಂಡ್ ಕೊಟ್ಟ ಆಫರ್ ಯಾವುವು?

1.ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ತಂತ್ರಗಾರಿಕೆಯನ್ನ ರಾಜ್ಯ ಬಿಜೆಪಿ ನಡೆಸಿದೆ. ಲೋಕಸಭಾ ಚುನಾವನೆಯಲ್ಲಿ ಸ್ಪರ್ಧಿಸುವ ಕುರಿತು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಮನಸ್ಸು ಮಾಡಿದರೇ ಹಾವೇರಿ, ಬೆಳಗಾವಿ ಲೋಕಸಭಾ ಟಿಕೆಟ್‌ ಆಫರ್‌ ನೀಡುವ ಕುರಿತು ಬಿಜೆಪಿ ಹೈಕಮಾಂಡ್‌ ಭರವಸೆ ನೀಡಿದೆ ಎನ್ನಲಾಗಿದೆ.

2.ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಹಿರಿಯ ನಾಯಕರಲ್ಲಿ ಒಬ್ಬರಾದ ಜಗದೀಶ್‌ ಶೆಟ್ಟರ್‌ ಅವರಿಗೆ ರಾಜ್ಯಸಭೆ ಸದಸ್ಯರನ್ನಾಗಿ ಮಾಡಿ ಕೇಂದ್ರದಲ್ಲಿ ಮಂತ್ರಿ ಮಾಡುವ ಆಫರ್ ಅನ್ನ ಬಿಜೆಪಿ ಹೈಕಮಾಂಡ್‌ ನಾಯಕರು ನೀಡಿದ್ದಾರೆ ಎಂದು ಹೇಳಲಾಗಿದೆ.

3.ಬಿಜೆಪಿ ಪಕ್ಷದಲ್ಲಿ ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ, ಸ್ಪೀಕರ್‌ ಆಗಿರುವ ಜಗದೀಶ್‌ ಶೆಟ್ಟರ್‌ ಅವರ ಹಿರಿತನವನ್ನು ಪರಿಗಣಿಸಿ ರಾಜ್ಯಪಾಲರನ್ನಾಗಿ ಮಾಡುವ ಭರವಸೆಯನ್ನು ಬಿಜೆಪಿ ಹೈಕಮಾಂಡ್ ನೀಡಿದೆ ಎನ್ನಲಾಗಿದೆ.

 

ಒಟ್ಟಿನಲ್ಲಿ, ಲೋಕಸಭಾ ಚುನಾವಣೆಯ ಹೊತ್ತಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ರೂಢ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಭರ್ಜರಿ ತಯಾರಿ ನಡೆಸಿದ್ದಾರೆ. ಅದರಂತೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾದ ಜಗದೀಶ್‌ ಶೆಟ್ಟರ್‌ ಅವರಿಗೆ ಬಿಜೆಪಿ ಹೈಕಮಾಂಡ್‌ ಮೂರು ಆಫರ್‌ ಗಳನ್ನು ನೀಡಿದ್ದಾರೆ. ಈ ಮೂರು ಆಫರ್‌ ಗಳಲ್ಲಿ ಜಗದೀಶ್‌ ಶೆಟ್ಟರ್ ಅವರು ಯಾವುದನ್ನು ಆಯ್ಕೆ ಮಾಡಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.

Related Articles

Back to top button