ರಾಜಕೀಯ
ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಜಯಪ್ರಕಾಶ್ ಹೆಗ್ಡೆಗೆ ಸ್ಥಾನ..!ಇನ್ನೆರಡು ದಿನದಲ್ಲಿ ಮೊದಲ ಪಟ್ಟಿ ಪ್ರಕಟ..?

Views: 96
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಕರ್ನಾಟಕದ 28 ಸ್ಥಾನಗಳ ಪೈಕಿ 14-15 ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇನ್ನೆರಡು ದಿನದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ
ಕಲಬುರಗಿಯಿಂದ ಖರ್ಗೆ ಅವರ ಅಳಿಯ ರಾಧಾಕೃಷ್ಣ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ತುಮಕೂರಿನ ಎಸ್‌ಪಿ ಮುದ್ದಹನುಮೇಗೌಡ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ ಹೆಗಡೆ ಸೇರಿದಂತೆ ಹಲವರ ಹೆಸರು ಮೊದಲ ಪಟ್ಟಿಯಲ್ಲಿ ಬಿಡುಗಡೆಯಾಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿ