ರಾಜಕೀಯ

ಕಾಂಗ್ರೆಸ್ ಸರ್ಕಾರದ ಬಜೆಟ್‌ಗೆ ಜೈ ಎಂದು ಅಭಿನಂದಿಸಿದ ಬಿಜೆಪಿ ಶಾಸಕ!

Views: 61

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ 2024-25ನೇ ಸಾಲಿನ ಬಜೆಟ್ ಅನ್ನು ಬಿಜೆಪಿ ನಾಯಕರು ವಿರೋಧಿಸಿದ್ದಾರೆ. ಬಿಜೆಪಿ ನಾಯಕರ ಆರೋಪಕ್ಕೆ ಕಾಂಗ್ರೆಸ್ ಶಾಸಕರು, ಸಚಿವರು ಕೆಂಡಾಮಂಡಲರಾಗಿದ್ದಾರೆ. ಗೃಹ ಸಚಿವ ಪರಮೇಶ್ವರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಜೆಟ್ ಓದದೇ ಬಿಜೆಪಿ ನಾಯಕರು ಸಭಾತ್ಯಾಗ ಮಾಡಿದ್ದು ಸರಿಯಲ್ಲ. ಸಮಸ್ಯೆ ಇದ್ರೆ ಚರ್ಚೆ ಮಾಡಲಿ. ಕನ್ನಡಿಗರ ಸೇವೆಗೆ ಇರೋದಾ? ಮೋದಿ ಸೇವೆಗಿರೋದಾ? ಎಂದು ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದ್ದಾರೆ.

ಬಿಜೆಪಿ ನಾಯಕರ ಟೀಕೆಗಳಿಗೆ ಕಾಂಗ್ರೆಸ್ ನಾಯಕರು ಉತ್ತರ ಕೊಡುತ್ತಿರುವಾಗ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರೇ ಬಜೆಟ್‌ ಜೈ ಎಂದು ಅಚ್ಚರಿ ಮೂಡಿಸಿದ್ದಾರೆ. ವಿಧಾನಸೌಧದಲ್ಲಿ ನ್ಯೂಸ್‌ ಫಸ್ಟ್ ಜೊತೆ ಮಾತನಾಡಿದ ಶಾಸಕ ಸೋಮಶೇಖರ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರನ್ನು ಅಭಿನಂದಿಸಿದ್ದಾರೆ. ರಾಜ್ಯ ಸರ್ಕಾರ ಮಂಡಿಸಿದ ಬಜೆಟ್​ನ್ನು ಕೊಂಡಾಡಿದ್ದಾರೆ.

ಬಜೆಟ್‌ನಲ್ಲಿ ಬೆಂಗಳೂರಿಗೆ ಸೀಮಿತವಾಗಿ ಮಾತನಾಡುವುದಾದರೆ ನಾವು ಏನೇನು ಬೇಡಿಕೆ ಇಟ್ಟಿದ್ದೆವೋ ಅದೆಲ್ಲವನ್ನು ಕೂಡ ಜಾರಿಗೆ ತಂದಿದ್ದಾರೆ. ಕಸದ ಘಟಕಗಳನ್ನು 100 ಪರ್ಸೆಂಟ್ ಶಿಫ್ಟ್ ಮಾಡಲೇಬೇಕು ಅನ್ನೋದು ನಮ್ಮ ಮನವಿ ಆಗಿತ್ತು. ಅದರಂತೆ ಕಸದ ಘಟಕಗಳನ್ನು ಶಿಫ್ಟ್ ಮಾಡಿದ್ದಾರೆ. ಮೆಟ್ರೋ ಕಾಮಗಾರಿ ಮಾಡ್ತಾ ಇದ್ದಾರೆ. ಅದನ್ನು ನಮ್ಮ ಕ್ಷೇತ್ರಗಳಿಗೆ ವಿಸ್ತರಣೆ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ಮಾಡಲು ಕೇಳಿದ್ದೆವು ಅದಕ್ಕೆ 1700 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಬರೀ ಯಶವಂತಪುರ ಕ್ಷೇತ್ರದಲ್ಲಷ್ಟೇ ಅಲ್ಲ. ಬೆಂಗಳೂರಿನ 28 ಕ್ಷೇತ್ರಕ್ಕೂ ಇದರಿಂದ ಅನುಕೂಲವಾಗಲಿದೆ. ಇದೊಂದು ಒಳ್ಳೆಯ ಬಜೆಟ್ ಎಂದು ಶಾಸಕ ಎಸ್ .ಟಿ ಸೋಮಶೇಖರ್ ಹೇಳಿದ್ದಾರೆ.

Related Articles

Back to top button