ಕರಾವಳಿ
ಕಾಪು ದೇವಸ್ಥಾನದ ಕೆರೆಗೆ ಹಾರಿ ಅತಿಥಿ ಉಪನ್ಯಾಸಕ ಆತ್ಮಹತ್ಯೆ

Views: 111
ಉಡುಪಿ: ಬೆಳಪು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಅತಿಥಿ ಉಪನ್ಯಾಸಕರೊಬ್ಬರು ಕಾಪು ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪಡುಬಿದ್ರಿ ವಿನಯ ರಾವ್ (27) ಆತ್ಮಹತ್ಯೆ ಮಾಡಿಕೊಂಡವರು.ಮೃತ ವಿನಯ್ ಅವಿವಾಹಿತರಾಗಿದ್ದು ತಂದೆ, ತಾಯಿ, ಸಹೋದರಿ, ಸಹೋದರನನ್ನು ಅಗಲಿದ್ದಾರೆ.
ಅತಿಥಿ ಉಪನ್ಯಾಸಕ ವಿನಯ್ ರಾವ್ ಗುರುವಾರ ಮನೆಯಿಂದ ಕಾಲೇಜಿಗೆ ತೆರಳಿದ್ದು, ಸಂಜೆ ಇನ್ನಂಜೆ ದೇಗುಲದ ಸುತ್ತಮುತ್ತ ಓಡಾಡಿಕೊಂಡ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಶುಕ್ರವಾರ ಮುಂಜಾನೆ ದೇವಳದ ಕೆರೆಯಲ್ಲಿ ಮೃತ ದೇಹ ಪತ್ತೆಯಾಗಿದ್ದು,ಕೆರೆಯ ದಡದಲ್ಲಿ ಲ್ಯಾಪ್ ಟ್ಯಾಪ್ ಸಹಿತ ಕೆಲವು ಸೊತ್ತುಗಳು ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ
ಮೃತ ವಿನಯ್ ಅವಿವಾಹಿತರಾಗಿದ್ದು ತಂದೆ, ತಾಯಿ, ಸಹೋದರಿ, ಸಹೋದರನನ್ನು ಅಗಲಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ