ಇತರೆ
ಕಾರು ನಿಯಂತ್ರಣ ತಪ್ಪಿ ಪಲ್ಟಿ: ಯುವತಿ ಸಾವು

Views: 0
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಪರಿಣಾಮ ಯುವತಿಯೊಬ್ಬಳು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.
ಮೃತಪಟ್ಟವರು ಪುತ್ತೂರು ನಿವಾಸಿ ಇಬ್ರಾಹಿಂ ಅವರ ಪುತ್ರಿ ಖತೀಜಹನ( 20) ಎಂದು ಗುರುತಿಸಲಾಗಿದೆ.
ತಾಯಿ ಜೊತೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುವ ಹಿನ್ನೆಲೆಯಲ್ಲಿ ವೈದ್ಯರನ್ನು ಭೇಟಿ ಮಾಡಲು ಪುತ್ತೂರಿನಿಂದ ಹೋಗುವ ವೇಳೆ ಘಟನೆ ಸಂಭವಿಸಿದೆ ಅಪಘಾತದ ತೀವ್ರತೆಗೆ ಕಾರಣ ಬಾಗಿಲು ಕಿತ್ತು ಹೋಗಿ ಯುವತಿ ಕಾರಿನಿಂದ ಹೊರಗೆ ಎಸೆಯಲ್ಪಟ್ಟಿದ್ದಾರೆ.
ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ ಜೊತೆಯಲ್ಲಿದ್ದ ತಾಯಿ ಸಣ್ಣ ಪುಟ್ಟ ಗಾಯಗಳಿಂದ ಅಪಾಯವಿಲ್ಲದೆ ಪಾರಾಗಿದ್ದಾರೆ.