ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು

Views: 0
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರನ್ನು ಹೊರ ತರಲು ಯತ್ನಿಸಿದ ಇಬ್ಬರು ಯುವಕರು ವಿದ್ಯುತ್ ಸಂಪರ್ಕದಿಂದ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಕಿರಣ್ ಹಾಗೂ ರವಿಕುಮಾರ್ ಮೃತಪಟ್ಟವರು ಇವರ ನೆರವಿಗೆ ಬಂದ ರವಿ, ಸಂದೇಶ್, ಶಿವಕುಮಾರ್, ವಿದ್ಯುತ್ ಶಾಕ್ ನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನೋವಾ ಕಾರು ಟ್ರಯಲ್ ನೋಡುವುದಾಗಿ ರವಿಕುಮಾರ್ ಪಡೆದಿದ್ದಾರೆ. ಈ ಸಂದರ್ಭದಲ್ಲಿ ರಸ್ತೆಯಲ್ಲಿ ರವಿಕುಮಾರ್, ಭಾಸ್ಕರ್, ರವಿ, ಸಂದೇಶ್, ಹಾಗೂ ಶಿವಕುಮಾರ್ ಅಶೋಕಪುರಂನತ್ತ. ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಂಪೌಂಡಿಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ನೆರವಿಗೆ ಬಂದವರು ಕಾರನ್ನು ಹೊರ ತರುವ ಯತ್ನದಲ್ಲಿ ಇವರಿಗೆ ವಿದ್ಯುತ್ ಸಂಪರ್ಕ ಸಾಧಿಸಿದೆ.
ಹೈವೋಲ್ಟೇಜ್ ತಂತಿ ಸಂಪರ್ಕ ಸಾಧಿಸಿದ ಪರಿಣಾಮ ರವಿಕುಮಾರ್ ಕುಸಿದು ಬಿದ್ದಿದ್ದಾರೆ. .ನೆರವಿಗೆ ಬಂದ ಆಟೋ ಡ್ರೈವರ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






