ಇತರೆ

ಕಾಲೇಜಿನ ಆವರಣದಲ್ಲೇ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್!

Views: 168

ಕನ್ನಡ ಕರಾವಳಿ ಸುದ್ದಿ: ಕಾಲೇಜಿನ ಆವರಣದಲ್ಲೇ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

ದಕ್ಷಿಣ ಕೊಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 25ರಂದು ಸಂಜೆ 7:30ರಿಂದ 10:50ರ ನಡುವೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಕೋಲ್ಕತ್ತಾ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆಯೇ ಅತ್ಯಾಚಾರ ಪ್ರಕರಣ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು, ಇದೀಗ ಕಾನೂನು ಕಾಲೇಜಿನ ಆವರಣದಲ್ಲಿಯೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.

Related Articles

Back to top button