ಕರಾವಳಿ

ಕಾಲೇಜು ವಿದ್ಯಾರ್ಥಿನಿಯೊಂದಿಗೆ ಬಸ್ಸಿನಲ್ಲಿ ಪ್ರಯಾಣಿಕನ ಅಸಭ್ಯ ವರ್ತನೆ;ಕಿಟಕಿಯ ಮೂಲಕ ಜಿಗಿದು ಪರಾರಿಯಾಗಲು ಯತ್ನಿಸಿದವನ ಸೆರೆ!

Views: 246

ಕನ್ನಡ ಕರಾವಳಿ ಸುದ್ದಿ: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ ವಿದ್ಯಾರ್ಥಿನಿಯೊಂದಿಗೆ ಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಹಿನ್ನೆಲೆಯಲ್ಲಿ  ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಮಹಮ್ಮದ್ ತೌಹೀದ್ ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಜೆ 6:30ರ ಸುಮಾರಿಗೆ ವಿದ್ಯಾರ್ಥಿನಿ ಮಂಗಳೂರಿನಿಂದ ಪುತ್ತೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಬಂಟ್ವಾಳ ತಾಲೂಕಿನ ಮಾಣಿ ಬಳಿ ವಿದ್ಯಾರ್ಥಿನಿಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿ ಆತನಿಗೆ ಎಚ್ಚರಿಕೆ ನೀಡಿದ್ದು, ಬಳಿಕ ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಸ್‌ ಪುತ್ತೂರು ಬಸ್ ನಿಲ್ದಾಣ ತಲುಪಿದಾಗ, ಆರೋಪಿ ತುರ್ತು ನಿರ್ಗಮನ ಕಿಟಕಿಯ ಮೂಲಕ ಜಿಗಿದು ಪರಾರಿಯಾಗಲು ಯತ್ನಿಸಿದರೂ, ವಿದ್ಯಾರ್ಥಿನಿಯ ತಂದೆ ಮತ್ತು ಸಾರ್ವಜನಿಕರು ತಕ್ಷಣ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ದೂರುದಾರರು ನೀಡಿದ ಹೇಳಿಕೆಯ ಆಧಾರವಾಗಿ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಾಲಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

Related Articles

Back to top button