ಇತರೆ

ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು  ಇರಿದು ಹತ್ಯೆ ಮಾಡಿದ್ದ ಆರೋಪಿಗೆ ಬೇಲ್ ಇಲ್ಲ: ಕೋರ್ಟ್ ಮಹತ್ವದ ಆದೇಶ

Views: 104

ಕನ್ನಡ ಕರಾವಳಿ ಸುದ್ದಿ: 2024ರ ಏಪ್ರಿಲ್ 18ರಂದು ಕಾಲೇಜು ಆವರಣದಲ್ಲಿ 23 ವರ್ಷದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಫಯಾಜ್‌ನ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.ಸೋಮವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮೊದಲ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪಲ್ಲವಿ ಬಿ ಆರ್ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಆರೋಪಿ ಫಯಾಜ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿರುವ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಸತ್ರ ಕೋರ್ಟ್ ಈ ಆದೇಶ ಮಾಡಿದ್ದಲ್ಲದೇ, ಮುಂದಿನ ವಿಚಾರಣೆಯನ್ನು ಆಗಸ್ಟ್ 10 ಕ್ಕೆ ಮುಂದೂಡಿದೆ. ಅಲ್ಲದೇ ಆಗಸ್ಟ್ 6 ರಂದು ಆರೋಪಿ ಕೋರ್ಟ್ ಗೆ ಹಾಜರಾಗುವಂತೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.‌ಕೊಲೆ ಪ್ರಕರಣದಲ್ಲಿ ಕಳೆದ ಒಂದು ವರ್ಷ 4 ತಿಂಗಳಿನಿಂದ ಫಯಾಜ್ ಜೈಲಿನಲ್ಲಿದ್ದಾನೆ. ಇನ್ನೂ ಹೈಕೋರ್ಟ್ ಗೆ ಆರೋಪಿ ಪರ ವಕೀಲರು ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

Related Articles

Back to top button