ಇತರೆ

ಕಾಲ್ತುಳಿತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಮಗನ ಸಮಾಧಿಯ ಮೇಲೆ ಗೋಳಾಡುತ್ತಿರುವ ತಂದೆ!

Views: 496

ಕನ್ನಡ ಕರಾವಳಿ ಸುದ್ದಿ: ಆರ್ ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ  ಭೂಮಿಕ್ ಡಿ.ಟಿ.ಲಕ್ಷ್ಮಣ-ಅಶ್ವಿನಿ ದಂಪತಿಯ ಏಕೈಕ ಪುತ್ರ. ಕಳೆದ ಇಪ್ಪತ್ತು ವರ್ಷಗಳಿಂದ ಲಕ್ಷ್ಮಣ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿ ಸಣ್ಣ ಕೈಗಾರಿಕೆ ನಡೆಸುತ್ತಿದ್ದಾರೆ.

ಭೂಮಿಕ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದು ಮೊನ್ನೆ ಕೂಡ ಕಾಲೇಜಿಗೆ ತೆರಳಿದ್ದರು.ನಂತರ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ದು, ಕಾಲ್ತುಳಿತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಹಾಸನ ಜಿಲ್ಲೆಯ ಬೇಲೂರಿನ ಭೂಮಿಕ್ ತಂದೆ ಮಗನ ಸಮಾಧಿ ಮುಂದೆ ಗೋಳಾಡುತ್ತಿರುವುದು ಎಂತವರ ಕಲ್ಲು ಹೃದಯವನ್ನು ಕರಗಿಸುವಂತಿದೆ.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದ ಲಕ್ಷ್ಮಣ್ ತಮ್ಮ ಮಗನನ್ನು ಕಳೆದುಕೊಂಡಿದ್ದಾರೆ. ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಸ್ವಂತ ಉದ್ಯಮ ಮಾಡಿಕೊಂಡು ಸಾಕಷ್ಟು ಸಂಪಾದನೆ ಮಾಡಿ ದೊಡ್ಡ ಮಟ್ಟಕ್ಕೆ ಬಂದಿದ್ದ ಲಕ್ಷ್ಮಣ್ ಮಗನಿಗಾಗಿ ಸಾಕಷ್ಟು ಕನಸು ಕಂಡಿದ್ದರು. ಮಗನು ಕೂಡ ಎಂದೂ ತಂದೆಗೆ ವಿರುದ್ಧವಾಗಿ ಮಾತನಾಡದೆ, ತಂದೆಯ ಮಾರ್ಗದರ್ಶನದಂತೆ ನಡೆಯುತ್ತಿದ್ದನು. ಆದರೆ ಕಳೆದ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಭೂಮಿಕ್ ಸಾವನ್ನಪ್ಪಿದ್ದನು.

ಅಂದಿನಿಂದ ಮಗ ಇಲ್ಲದನ್ನು ನೆನೆದು ಕಣ್ಣೀರಿಡುತ್ತಿರುವ ಭೂಮಿಕ್ ತಂದೆ. ಮಗನ ಸಾವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ ಕಣ್ಣೀರುಡುತ್ತಿದ್ದಾರೆ. ಮಗನ ಸಮಾಧಿಯ ಮೇಲೆ ಬಿದ್ದು ಹೊರಳಾಡಿರುವ ಭೂಮಿಕ್ ತಂದೆ ಆಕ್ರಂದನ ಮುಗಿಲು ಮುಟ್ಟಿದ್ದು. ಈ ಪರಿಸ್ಥಿತಿ ಯಾವ ತಂದೆಗೂ ಬರಬಾರದು ಎಂದು ಗೋಳಾಡಿದ್ದಾರೆ.

Related Articles

Back to top button