ಕಾಳಾವರ ಶಾಲೆಗೆ ಕಾಪು ಮುದ್ದಣ್ಣ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ (ರಿ) ಸಲ್ವಾಡಿ ಇವರಿಂದ ಉಚಿತ ನೋಟ್ ಪುಸ್ತಕ ಕೊಡುಗೆ

Views: 128
ಕನ್ನಡ ಕರಾವಳಿ ಸುದ್ದಿ: ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಪು ಮುದ್ದಣ್ಣ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ (ರಿ) ಸಳ್ವಾಡಿ ಇವರು ಕೊಡಮಾಡಿದ ಉಚಿತ ನೋಟ್ಸ್ ಪುಸ್ತಕಗಳನ್ನು ವಿತರಿಸಲಾಯಿತು.
ಟ್ರಸ್ಟಿನ ಕಾರ್ಯದರ್ಶಿಗಳಾದ ಶ್ರೀ ಕಿಶೋರ್ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭಹಾರೈಸಿದರು. ಇದೇ ಟ್ರಸ್ಟಿನಿಂದ ಈ ಹಿಂದೆ ಈ ಶಾಲೆಗೆ ನೀಡಿದ 10 ಕಂಪ್ಯೂಟರ್ ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿರುವುದನ್ನು ನೋಡಿ ಸಂತೋಷ ವ್ಯಕ್ತಪಡಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷರಾದ ದೀಪ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭರತ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಉಡುಪಿ ಡಯಟ್ ನ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮಕ್ಕೆ ಆಗಮಿಸಿ ದಾನಿಗಳ ಕೊಡುಗೆಯನ್ನು ಸ್ಮರಿಸಿ, ಇಲಾಖೆಯ ಪರವಾಗಿ ಅಭಿನಂದಿಸಿದರು.
ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪ್ರಕಾಶ್ ಮತ್ತು ಉಮ್ಮೆ ಸಲ್ಮಾ ಭಾಗವಹಿಸಿದ್ದರು. ಮುಖ್ಯೋಪಾಧ್ಯಾಯ ವೆಂಕಟ ಸ್ವಾಗತಿಸಿದರು. ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ವಕ್ವಾಡಿ ಬಾಲಕೃಷ್ಣ ಶೆಟ್ಟಿ ವಂದಿಸಿದರು. ಶಿಕ್ಷಕ ವೃಂದದವರು ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವಂತೆ ಸಹಕರಿಸಿದರು.