ಇತರೆ
ಕಾಳಾವರ ಸವೀಪ ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Views: 1631
ಕನ್ನಡ ಕರಾವಳಿ ಸುದ್ದಿ: ಕಾಳಾವರ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರೈಲ್ವೆ ಮಾರ್ಗದಲ್ಲಿ ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಸ್ಥಳೀಯ ನಿವಾಸಿ ಪ್ರಭಾಕರ ಶೆಟ್ಟಿ ( 45) ಎಂದು ಗುರುತಿಸಲಾಗಿದೆ.
ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.