ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Views: 123
ಕನ್ನಡ ಕರಾವಳಿ ಸುದ್ದಿ: ಗಣತಂತ್ರ ರಾಷ್ಟ್ರ ಭಾರತದ ಸೈನ್ಯದ ಬಲ ಮತ್ತು ಅಗಾಧತೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬಿಂಬಿಸುವ ಸರಕಾರದ ಪ್ರಯತ್ನಕ್ಕೆ ನಾವು ಬೆಂಬಲ ಸೂಚಿಸಬೇಕು. ಹಾಗೆಯೇ ದೇಶದ ವೈವಿಧ್ಯಮಯ ಕಲೆ, ಸಂಸ್ಕೃತಿಯನ್ನು ಅನಾವರಣಗೊಳಿಸುವ ದಿನವಾದ ಗಣರಾಜ್ಯೋತ್ಸವದ ಆಚರಣೆಯ ಮಹತ್ವವನ್ನು ಎಲ್ಲ ನಾಗರೀಕರು ವಿಶೇಷವಾಗಿ ಪರಿಗಣಿಸಬೇಕು” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವದಂದು ಧ್ವಜಾರೋಹಣಗೈದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನವೀನ ಕುಮಾರ ಶೆಟ್ಟಿಯವರು ಕರೆ ನೀಡಿದರು.
ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಪ್ರೀತೇಶ್ ಶೆಟ್ಟಿಯವರು ಗಣತಂತ್ರ ದಿನದ ಶುಭಾಶಯಗಳನ್ನು ಕೋರಿದರು.
ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಮ್ ಶೆಟ್ಟಿಯವರು ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀ ಸಂದೀಪ್ ಪೂಜಾರಿಯವರು ಧ್ವಜಾರೋಹಣ ಪ್ರಕ್ರಿಯೆಯನ್ನು ನಿರ್ದೇಶಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಭಾರತದ ಸಂವಿಧಾನ ರಚನೆಯ ಅರ್ಥ ವಿಸ್ತಾರವನ್ನು ತಿಳಿಸಿ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಜನಕನೆಂದು ಕರೆಯಲ್ಪಡುವ ಡಾ. ಬಿ.ಆರ್. ಅಂಬೇಡ್ಕರ್ ರವರ ಛಾಯಾಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಾಲೇಜಿನ ಎಲ್ಲ ಬೋಧಕ- ಬೋಧಕೇತರ ಸಿಬ್ಬಂಧಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.