ಶಿಕ್ಷಣ
ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು: E- ವೇಸ್ಟ್ ಮ್ಯಾನೇಜ್ ಮೆಂಟ್ ಬಗ್ಗೆ ಮಾಹಿತಿ ಕಾರ್ಯಕ್ರಮ

Views: 4
ಕನ್ನಡ ಕರಾವಳಿ ಸುದ್ದಿ: ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಮತಿ ವೇಸ್ಟ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ‘ E- ವೇಸ್ಟ್ ಮ್ಯಾನೇಜ್ ಮೆಂಟ್ ‘ ವಿಷಯದ ಬಗ್ಗೆ ಯೋಜನಾಧಿಕಾರಿ ಶ್ರೀ ಧೀರಜ್ ಶೆಣೈಯವರು ವಿದ್ಯಾರ್ಥಿಗಳಿಗೆ ಇಲೆಕ್ಟ್ರಾನಿಕ್ ತ್ಯಾಜ್ಯಗಳ ಸರಿಯಾದ ನಿರ್ವಹಣೆ ಮತ್ತು ವಿಲೇವಾರಿ ಬಗ್ಗೆ ಸ್ಲೈಡ್ ಮೂಲಕ ಮಾಹಿತಿ ಮತ್ತು ಅರಿವು ನೀಡಿದರು.
ಮುಂದಿನ ವಾರ ಸೂಚಿಸಿದ ಮೂರು ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿರುವ ಇಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ತಂದು ಕೊಟ್ಟರೆ ಅದರ ಸಮರ್ಪಕ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿ ಸುಮತಿ ಶೆಣೈ ಧನ್ಯವಾದ ಸಲ್ಲಿಸಿದರು