ಇತರೆ

ಕುಂದಾಪುರ:ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿ ಬಂಧನ 

Views: 276

ಕನ್ನಡ ಕರಾವಳಿ ಸುದ್ದಿ: ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆನಂದ (26) ಬಂಧಿತ ಆರೋಪಿ.ಕುಂದಾಪುರ ತಾಲೂಕಿನ ಗುಡ್ಡೆ ಅಂಗಡಿಯ ಮನೆಯೊಂದಕ್ಕೆ ನುಗ್ಗಿ ಸುಮಾರು 18 ಗ್ರಾಂ ತೂಕದ ಅಂದಾಜು 1,45,000 ರೂ. ಮೌಲ್ಯದ ಚಿನ್ನದ ಸರ ಕಳ್ಳತನ ಮಾಡಿರುವುದಾಗಿ ಬಸವ ಪೂಜಾರಿ (72) ಎಂಬವರು ನೀಡಿದ ದೂರಿನಂತೆ ಕೋಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ ಕುಮಾ‌ರ್ ಆರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಿ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

Related Articles

Back to top button