ಕರಾವಳಿ

ಕುಂದಾಪುರ:ಮರವಂತೆ ಬೀಚ್ ನಲ್ಲಿ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐವರ ರಕ್ಷಣೆ

Views: 134

ಕನ್ನಡ ಕರಾವಳಿ ಸುದ್ದಿ: ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ  ಪ್ರಸಿದ್ಧ  ಪ್ರವಾಸಿ ತಾಣವಾಗಿರುವ ತ್ರಾಸಿ-ಮರವಂತೆ ಬೀಚ್ ನಲ್ಲಿ  ನೀರು ಪಾಲಾಗುತ್ತಿದ್ದ ಐವರನ್ನು ರಕ್ಷಿಸಲಾಗಿದೆ.

ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಇನ್ನೊಂದು ಪ್ರಕರಣದಲ್ಲಿ ಗೋವಾ ಮೂಲದ ಓರ್ವ ಮಹಿಳೆ ಸೇರಿದಂತೆ ಒಟ್ಟು ಐವರನ್ನು ರಕ್ಷಿಸಲಾಗಿದೆ.

ಲೈಫ್ ಗಾರ್ಡ್ ಸಿಬ್ಬಂದಿ ಪೃಥ್ವಿರಾಜ್ ಉಪ್ಪುಂದ ಹಾಗೂ ಪ್ರಮೋದ್ ರಾಜ್ ಉಪ್ಪುಂದ ಹಾಗೂ ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, 24*7 ಅಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ನೇತೃತ್ವದಲ್ಲಿ ರಕ್ಷಣೆ ಮಾಡಲಾಗಿದೆ.

ಬಳಿಕ ಸ್ಥಳಕ್ಕಾಗಮಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿಗಳು ಒನ್ ಟು ಸಿಬ್ಬಂದಿ, ಹೈವೇ ಪೆಟ್ರೋಲ್ ಸಿಬ್ಬಂದಿ ಸೈರನ್ ಮೊಳಗಿಸಿ ಸುರಕ್ಷತೆ ದೃಷ್ಟಿಯಿಂದ ಪ್ರವಾಸಿಗರನ್ನು ಎಚ್ಚರಿಸಿದ್ದಾರೆ.

Related Articles

Back to top button