ಇತರೆ

ಕುಂದಾಪುರ: ಅರಾಟೆಯಲ್ಲಿ ಅಪಘಾತಗೊಂಡು ತಿಂಗಳಿಗೂ ಹೆಚ್ಚು ಕಾಲ ಜೀವನ್ಮರಣ ಹೋರಾಟ ನಡೆಸಿದ ಗಾಯಾಳು ಸಾವು

Views: 197

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಸಮೀಪ  ಅರಾಟೆ ಸೇತುವೆಯಲ್ಲಿ ಕಳೆದ ಒಂದು ತಿಂಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಲೂರಿನ ನಿವಾಸಿ ಮಹಾಬಲ ಜೋಯಿಸ್ ಅವರ ಪುತ್ರ ರತ್ನಾಕರ ಜೋಯಿಸ್ (47) ಅವರು ಫೆ. 27ರಂದು ಶುಕ್ರವಾರ ಸಾವನ್ನಪ್ಪಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಜ. 21ರ ಬೆಳಿಗ್ಗೆ ಅರಾಟೆ ಹೊಸ ಸೇತುವೆಯಲ್ಲಿ ರತ್ನಾಕರ ಅವರು ಚಲಾಯಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ರಫೀಕ್ ಚಲಾಯಿಸುತ್ತಿದ್ದ ಲಾರಿ ಢಿಕ್ಕಿಯಾಗಿತ್ತು. ಪರಿಣಾಮ ರತ್ನಾಕರ ಅವರ ತಲೆಗೆ, ಮುಖಕ್ಕೆ ಗಂಭೀರ ಗಾಯವಾಗಿತ್ತು. ಅವರನ್ನು ಕುಂದಾಪುರದ ಆಸ್ಪತ್ರೆಗೆ, ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ತಿಂಗಳಿಗೂ ಹೆಚ್ಚು ಕಾಲ ಜೀವನ್ಮರಣ ಹೋರಾಟ ನಡೆಸಿದ ರತ್ನಾಕರ ಅವರು ಫೆ. 27ರಂದು ಶುಕ್ರವಾರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಮೃತರ ಗೌರವಾರ್ಥ ಶುಕ್ರವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಆಲೂರಿನ ಪೇಟೆಯ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು.

 

.

Related Articles

Back to top button