ಇತರೆ
ಕುಂದಾಪುರ: ಅಲ್ಬಾಡಿಯಲ್ಲಿ ತಾಯಿ ಸಾವಿನಿಂದ ಮನನೊಂದು ಮಗಳು ಆತ್ಮಹತ್ಯೆ
Views: 110
ಕನ್ನಡ ಕರಾವಳಿ ಸುದ್ದಿ: ತಾಯಿಯ ಸಾವಿನ ನಂತರ ಖಿನ್ನತೆಗೆ ಒಳಗಾಗಿ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲ್ಪಾಡಿಯಲ್ಲಿ ಸಂಭವಿಸಿದೆ.
ಅಲ್ಪಾಡಿ ಗ್ರಾಮದ ರತ್ನಾ (38) ಆತ್ಮಹತ್ಯೆ ಮಾಡಿಕೊಂಡವರು.
ತಾಯಿ ಮೂರು ತಿಂಗಳ ಹಿಂದೆ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದರು. ಅವತ್ತಿನಿಂದ ಮಗಳು ಕೂಡ ಖಿನ್ನತೆಗೆ ಒಳಗಾಗಿ ಕೆಲಸಕ್ಕೂ ಹೋಗದೆ ಮನೆಯಲ್ಲಿಯೇ ಇರುತ್ತಿದ್ದರು. ನ. 14ರ ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು ಬಂದ ಅವರು ಸಮೀಪದ ತೋಟದಲ್ಲಿರುವ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು. ಪತಿ ಚಂದ್ರ ಅವರು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






