ರಾಜಕೀಯ
ಕುಂದಾಪುರ ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಗಂಗಾಧರ ಶೆಟ್ಟಿ ನಿಧನ

Views: 81
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಆನಗಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರಾದ ಗಂಗಾಧರ ಶೆಟ್ಟಿಯವರು ಶುಕ್ರವಾರ ರಾತ್ರಿ ನಿಧನರಾಗಿರುತ್ತಾರೆ.
ಇಂದು ಅವರ ಹೇರಿಕುದ್ರು ಸ್ವಗೃಹದಲ್ಲಿ ಅಂತ್ಯಕ್ರಿಯೆ ನೆಡೆಯಲಿದೆ ಎಂದು ತಿಳಿದುಬಂದಿದೆ
ಗಂಗಾಧರ ಶೆಟ್ಟಿಯವರ ಅಗಲಿಕೆಗೆ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹಾಗೂ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.