ಶಿಕ್ಷಣ
ಕುಂದಾಪುರ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Views: 52
“ನಮ್ಮ ನಾಗರೀಕ ಜೀವನದ ಪ್ರತಿಯೊಂದು ಹಂತದಲ್ಲಿಯೂ ಅಗತ್ಯವಿರುವ ದಾಖಲೆಯನ್ನು ಅನುಮೋದಿಸುವುದೇ ಘನ ಸರಕಾರ. ಅಂಥ ಸರಕಾರ ನೀಡುವ ಸೌಲಭ್ಯಗಳನ್ನು ಎಲ್ಲರೂ ಇತಿಮಿತಿಯಲ್ಲಿ ಬಳಸಿಕೊಳ್ಳುವುದು ಅವಶ್ಯಕ. ಸ್ವಾರ್ಥ ಮನೋಭಾವದಿಂದ ಇನ್ನೊಬ್ಬರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವುದು ಕೂಡ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದಂತೆಯೇ” ಎಂದು 75 ನೇ ಗಣರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ ಧ್ವಜಾರೋಹಣವನ್ನು ನರವೇರಿಸಿದ ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನವೀನ್ ಕುಮಾರ ಶೆಟ್ಟಿಯವರು ಹೇಳಿದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಮ್ ಶೆಟ್ಟಿಯವರು ಕಾರ್ಯಕ್ರಮವನ್ನು ನಿರ್ದೇಶಿಸಿದರು. ಕಾಲೇಜಿನ ಎಲ್ಲ ಬೋಧಕ- ಬೋಧಕೇತರ ಸಿಬ್ಬಂಧಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.