ಇತರೆ
ಕುಂದಾಪುರ: ಉತ್ತರ ಭಾರತ ಪ್ರವಾಸಕ್ಕೆ ತೆರಳಿದ್ದ ಅರಣ್ಯ ಅಧಿಕಾರಿ ಹೃದಯಾಘಾತದಿಂದ ಸಾವು

Views: 196
ಕುಂದಾಪುರ: ಬೈಂದೂರು ಸೋಮೇಶ್ವರದ ನಿವಾಸಿ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಕುಟುಂಬದವರೊಂದಿಗೆ ಉತ್ತರ ಭಾರತ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರು ಉದಯ ಜೋಗಿ (59) ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಪತ್ನಿ ಹಾಗೂ ತಮ್ಮ ಸ್ನೇಹಿತರೊಂದಿಗೆ ಉತ್ತರ ಭಾರತಕ್ಕೆ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.ಮೃತದೇಹವನ್ನು ಸೋಮವಾರ ಹುಟ್ಟೂರಿಗೆ ತರಲಾಗುವುದು ಎಂದು ತಿಳಿದುಬಂದಿದೆ.
ಐಎಫ್‌ಎಸ್ ಅಧಿಕಾರಿಯಾಗಿದ್ದ ಅವರು ಅರಣ್ಯ ಇಲಾಖೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದಾರೆ. 2017ರಿಂದ ಗೇರು ಅಭಿವೃದ್ಧಿ ನಿಗಮದ ಮಂಗಳೂರಿನ ವಿಭಾಗೀಯ ಅಧಿಕಾರಿಯಾಗಿ ಪ್ರಭಾರ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.