ಇತರೆ

ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್.ಆ‌ರ್ 

Views: 49

ಕನ್ನಡ ಕರಾವಳಿ ಸುದ್ದಿ: ಕುಂದಾಪುರ  ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆ‌ರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.

ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು. ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದರು. ಇದೀಗ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ.

Related Articles

Back to top button