ಇತರೆ
ಕುಂದಾಪುರ: ಕಾಲೇಜಿನಿಂದ ಮರಳುತ್ತಿದ್ದ ವೇಳೆ ಮೋಟಾರ್ ಬೈಕ್‌ನಲ್ಲಿ ಬಂದ ಇಬ್ಬರು ವಿದ್ಯಾರ್ಥಿನಿಯ ಕುತ್ತಿಗೆಯ ಸರ ಅಪಹರಣ

Views: 395
ಕನ್ನಡ ಕರಾವಳಿ ಸುದ್ದಿ: ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ಶಿರೂರು ಗ್ರಾಮದ ಅಳ್ವೆಗದ್ದೆ ಎಂಬಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ.
ಕಾಲೇಜಿನಿಂದ ಕರಿಕಟ್ಟೆ ಕ್ರಾಸ್ ಬಳಿ ಬಸ್ ಇಳಿದು ಅಳ್ಳೆಗದ್ದೆ ರಸ್ತೆಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಮೋಟಾರ್ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ವಿದ್ಯಾರ್ಥಿನಿಯ ಕುತ್ತಿಗೆಯಲ್ಲಿದ್ದ 10 ಗ್ರಾಂ ತೂಕದ ಸುಮಾರು 81 ಸಾವಿರ ಮೌಲ್ಯದ ಚಿನ್ನದ ಸರ ಅಪಹರಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.