"ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯೊಂದಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವುದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಹತ್ವದ ಪಾತ್ರ ವಹಿಸುತ್ತಾರೆ"---ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ
ಕನ್ನಡ ಕರಾವಳಿ ಸುದ್ದಿ: ಶಾಲೆಗಳಲ್ಲಿ ದೈಹಿಕ ಶಿಕ್ಷಣದ ಪಾತ್ರ ಮಹತ್ವವಾದದ್ದು ಮಾಜಿ ಸಚಿವ ಕೆ ಜಯಪ್ರಕಾಶ್ ಹೆಗ್ಡೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯೊಂದಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವುದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಳಾವರದಲ್ಲಿ ಫೆ.22 ರಂದು ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ ಹಾಗೂ ಸಮ್ಮೇಳವನ್ನು ಉದ್ಘಾಟಿಸಿ ಮಾಜಿ ಸಚಿವ ಕೆ ಜಯಪ್ರಕಾಶ್ ಹೆಗ್ಡೆ ಮಾತನಾಡಿದರು.
ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರನ್ನು ಶಾನಾಡಿ ಚಂದ್ರಶೇಖರ್ ಹೆಗ್ಡೆ , ಮಾಜಿ ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಶ್ರೀ ಕಾಳಿಂಗ ಸುಬ್ರಮಣ್ಯ ದೇವಸ್ಥಾನ ಕಾಳಾವರ, ಭಡ್ತಿ ಹೊಂದಿದ ದೈಹಿಕ ಶಿಕ್ಷಕ ಶಿಕ್ಷಣ ಶಿಕ್ಷಕರನ್ನು ಕಾಳಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೊರ್ಗಿ ರಂಜಿತ್ ಕುಮಾರ್ ಶೆಟ್ಟಿ, ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಕಾಳಿಂಗ ಸುಬ್ರಮಣ್ಯ ದೇವಸ್ಥಾನ ಕಾಳಾವರ ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಅಜಿತ್ ಕುಮಾರ್ ಶೆಟ್ಟಿ ಅಸೋಡು, ರಾಜ್ಯ ರಾಷ್ಟ್ರಮಟ್ಟಕ್ಕೆ ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭರತ್ ಕುಮಾರ್ ಶೆಟ್ಟಿ, ಸಾಧಕ ಶಿಕ್ಷಕರನ್ನು ಉದ್ಯಮಿ ಚತುರ್ ಶೆಟ್ಟಿ ಸಳ್ವಾಡಿ ಸನ್ಮಾನಿಸಿ ಗೌರವಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ವಕ್ವಾಡಿ ಬಾಲಕೃಷ್ಣ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಚಂದ್ರಶೇಖರ್ ಶೆಟ್ಟಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ, ವಿಜಯಕುಮಾರ್ ಶೆಟ್ಟಿ ಅಧ್ಯಕ್ಷರು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಜಿಲ್ಲೆ ,ಸತ್ಯನಾರಾಯಣ .ಜಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು ಕುಂದಾಪುರ ,ಕಾಳಾವರ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಮುಸರತ್ ಜಹಾನ್ ಅಕ್ಬರ್ ಎಂ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಟ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ದೀಪಾ ಶೆಟ್ಟಿ, ನಿವೃತ್ತ ಉಪ ಪ್ರಾಂಶುಪಾಲರಾದ ಕರುಣಾಕರ ಶೆಟ್ಟಿ ಕೆಪಿಎಸ್ ಕೊಟೇಶ್ವರ,ನಿವೃತ್ತ ಯುವಜನ ಸೇವಾ ಕ್ರೀಡಾಧಿಕಾರಿ ಎಸ್ ದಿನಕರ್ ಹೆಗ್ಡೆ, ಕುಸುಮಾಕರ ಶೆಟ್ಟಿ ಯುವಜನ ಸೇವಾ ಕ್ರೀಡಾಧಿಕಾರಿ, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಉಷಾಲತಾ ಶೆಟ್ಟಿ ಉಪಸ್ಥಿತರಿದ್ದರು.
ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಕ್ವಾಡಿ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ,ಸೆಂಟ್ ಮೇರಿಸ್ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಕೆ.ಕೆ ರಾಮ ವಂದಿಸಿದರು.