ಇತರೆ
ಕುಂದಾಪುರ ಕಿರಾಣಿ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ

Views: 220
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಚಿಕ್ಕನಸಾಲು ರಸ್ತೆಯಲ್ಲಿರುವ ಕಿರಾಣಿ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಬುಧವಾರ ನಡೆದ ಘಟನೆಯಲ್ಲಿ ಚಿಕ್ಕನಸಾಲು ರಸ್ತೆಯಲ್ಲಿರುವ ಚಂದ್ರಶೇಖರ್ ಎಂಬುವವರ ಕಿರಾಣಿ ಅಂಗಡಿಗೆ ಅಕಸ್ಮಿಕ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ಸಾಮಾನುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.
ಅಂಗಡಿ ಮಾಲಿಕ ಬೆಳಿಗ್ಗೆ ಅಂಗಡಿಯ ಬಾಗಿಲನ್ನು ತೆರೆದು ದೇವರಿಗೆ ದೀಪವನ್ನು ಹಚ್ಚಿ ಹತ್ತಿರದ ಶ್ರೀ ಮೈಲಾರೇಶ್ವರ ದೇವಸ್ಥಾನಕ್ಕೆ ಹೋಗಿ ಕೆಲವೇ ನಿಮಿಷಗಳಲ್ಲಿ ಅಂಗಡಿಗೆ ವಾಪಾಸ್ಸು ಬರುವುದರೊಳಗೆ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ.ಅಂಗಡಿಯೊಳಗಿದ್ದ ಫ್ರಿಡ್ಜ್, ಕಪಾಟು, ಶೋಕೇಸ್, ಪೀಠೋಪಕರಣ, ಅಂಗಡಿ ಸಾಮಾನುಗಳು ಹೊತ್ತಿದ ಬೆಂಕಿಗೆ ಸಂಪೂರ್ಣ ಕರಗಿಹೋಗಿದ್ದು ಸುಮಾರು 4 ರಿಂದ 5 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.