ಕರಾವಳಿ

ಕುಂದಾಪುರ: ಕೊರ್ಗಿಯಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 178

ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮದ ಕಾಡಿನಬೆಟ್ಟು ನಿವಾಸಿ ವಿಶ್ವನಾಥ ಅವರ ಪತ್ನಿ ಸುಶೀಲಾ (56) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.13ರ ಬೆಳಿಗ್ಗೆ ನಡೆದಿದೆ.

ಪತಿ ವಿಶ್ವನಾಥ ಅವರು ಬೆಳಗ್ಗೆ 8 ಗಂಟೆಗೆ ಮನೆಯಿಂದ ಮೊಳಹಳ್ಳಿಗೆ ತೆರಳಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ  ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು,ಮನ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಎಂದು ತಿಳಿಯಲಾಗಿದೆ. ಅವರ ಸಹೋದರ ಕುಶಲ ಹಳ್ನಾಡು ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Related Articles

Back to top button