ಇತರೆ

ಕುಂದಾಪುರ: ಕೋಡಿ ಸೇತುವೆ ಮೇಲೆ ವಿವಾಹಿತ ಮಹಿಳೆಯ ಸ್ಕೂಟಿ, ಚಪ್ಪಲಿ ಪತ್ತೆ, ಆತ್ಮಹತ್ಯೆ ಶಂಕೆ!

Views: 363

ಕನ್ನಡ ಕರಾವಳಿ ಸುದ್ದಿ: ವಿವಾಹಿತ ಮಹಿಳೆ ಯೋರ್ವರು ಡೆತ್ ನೋಟ್  ಬರೆದಿಟ್ಟು ಕುಂದಾಪುರ ಕೋಡಿ ಸೇತುವೆ ಮೇಲೆ ಸ್ಕೂಟಿಯನ್ನು ಇರಿಸಿ  ಜೂ. 9 ರಂದು ಸೋಮವಾರ ಬೆಳಿಗ್ಗೆ ನಾಪತ್ತೆಯಾದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಸರ್ (32) ಎಂದು ತಿಳಿದು ಬಂದಿದೆ.

ಇವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು.

ಸೋಮವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರೋಡ್ ನಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟಿ, ಚಪ್ಪಲಿ ಮತ್ತು ಡೆತ್  ನೋಟ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸರು, ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ಸೇರಿ ಹಗಲಿಡೀ ನದಿಯಲ್ಲಿ ಹುಡುಕಾಟ ನಡೆಸಿದ್ದು ಯಾವುದೇ ಸುಳಿವು  ಸಿಗಲಿಲ್ಲ ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ.ಇದರಿಂದಾಗಿ ಆತ್ಮಹತ್ಯೆಯೋ ಅಥವಾ ನಾಪತ್ತೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.ಹೀನಾ ಅವರು ತಾಯಿ ಸಾರಿಕಾ ಬಾನು ನೀಡಿದ ದೂರಿನಂತೆ ಕುಂದಾಪುರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Related Articles

Back to top button