ಕರಾವಳಿ
ಕುಂದಾಪುರ ಕೋಳಿ ಅಂಕಕ್ಕೆ ದಾಳಿ 6 ಮಂದಿ ವಶಕ್ಕೆ

Views: 109
ಗಂಗೊಳ್ಳಿ ಹಾಗೂ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋಳಿ ಅಂಕಕ್ಕೆ ದಾಳಿ ಮಾಡಿ ಆರು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಗಂಗೊಳ್ಳಿ, ಶಂಕರನಾರಾಯಣ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ ಕೋಳಿ ಅಂಕದಲ್ಲಿ ನಿರತರಾಗಿದ್ದ ದಿನೇಶ್, ಉದಯ್, ದೇವೇಂದ್ರ ಎಂಬ ಮೂವರನ್ನು ವಶಕ್ಕೆ ಪಡೆದು ಅವರ ಬಳಿಯಲ್ಲಿದ್ದ ಎಂಟು ಕೋಳಿ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ಶಿವರಾಮ್, ಉದಯ, ಸುಧೀರ್ ಎಂಬುವರನ್ನು ವಶಕ್ಕೆ ಪಡೆದುಕೊಂಡು ಅವರ ಬಳಿಯಲ್ಲಿದ್ದ ಕೋಳಿ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ.
ಎರಡು ಪ್ರಕರಣಗಳು ಶಂಕರನಾರಾಯಣ ಮತ್ತು ಗಂಗೊಳ್ಳಿ ಠಾಣೆಯಲ್ಲಿ ದಾಖಲಾಗಿದೆ.