ಶಿಕ್ಷಣ
ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಕಾಲೇಜು : ಕ್ಯಾಂಪಸ್ ನೇಮಕಾತಿ ಡ್ರೈವ್

Views: 0
ಕುಂದಾಪುರ: ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ICICI Bank ವತಿಯಿಂದ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೈವ್ ನೆರವೇರಿತು.
ಕಾಲೇಜಿನಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ICICI Bank ಸಂಸ್ಥೆಯ ಸಿಬ್ಬಂದಿಗಳಾದ ಶ್ರೀನಿಧಿ, ಶೀತಲ್, ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಗಳಾದ ಶ್ರೀ ಮಹೇಶ್ ಕುಮಾರ್, ಶ್ರೀ ರಜತ್ ಬಂಗೇರ್ ಉಪಸ್ಥಿತರಿದ್ದರು