ಕುಂದಾಪುರ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಗಣಕವಿಜ್ಞಾನ ಸ್ಕಿಲ್ ಡೆವಲಪ್ಮೆಂಟ್ ಒಡಂಬಡಿಕೆ ಕಾರ್ಯಕ್ರಮ

Views: 48
ಕುಂದಾಪುರ : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ನಡುವಿನ ಒಡಂಬಡಿಕೆ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾl ಸುರ್ಜಿತ್ ಸಿಂಗ್ ಪಾಬ್ಲಾ ಅವರು ಭಾಗವಹಿಸಿ ಮಾತನಾಡಿ, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜೊತೆಗೆ ತಂತ್ರಜ್ಞಾನದ ಅರಿವನ್ನು ಮೂಡಿಸಿಕೊಂಡು ಹೆಜ್ಜೆಇಟ್ಟಾಗಷ್ಟೇ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ” ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಗಣಕಶಾಸ್ತ್ರ ಉಪನ್ಯಾಸಕರಾದ ಪ್ರಣವ್ ಬಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಸಾಫ್ಟ್ವೇರ್ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಶರತ್ ಕುಮಾರ್ ಹಾಗೂ ಶ್ರೀ ಅಕ್ಷಯ್ ಕುಮಾರ್ ತಮ್ಮ ಹೊಸ ಉತ್ಪನ್ನಗಳನ್ನು ಪರಿಚಯಿಸಲಾಯಿತು.
ಕಾರ್ಯಕ್ರಮದಲ್ಲಿ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ರಿಜಿಸ್ಟ್ರಾರ್ ಡಾl. ಪ್ರದೀಪ್ ಕುಮಾರ್ ಶೆಟ್ಟಿ, ವಿಭಾಗ ಮುಖ್ಯಸ್ಥರಾದ ಶ್ರೀಮತಿ ರಾಜಲಕ್ಷ್ಮಿ ಆನಂದನ್, ಪ್ಲೇಸ್ಮೆಂಟ್ ಅಡ್ವೈಸರ್ ಡಾ. ವಿಠ್ಠಲೇಶ್ವರ ಉಪಸ್ಥಿತರಿದ್ದರು.
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಸ್ತಾವಿಕ ನುಡಿಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕರಾದ ಕು. ರಶ್ಮಿ ಸ್ವಾಗತಿಸಿದರು, ಶ್ರೀಮತಿ ವಿಲ್ಮಾ ಮತ್ತು ಶ್ರೀಮತಿ ಜಯಲಕ್ಷ್ಮಿ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕು.ಮೇಘಾ ವಂದಿಸಿದರು ಮತ್ತು ಶ್ರೀ ಪ್ರಣಾಮ್ ಬಿ. ಕಾರ್ಯಕ್ರಮ ನಿರೂಪಿಸಿದರು.